ದಸರಾ ಕೈಂಕರ್ಯಗಳು ನಿರ್ವಿಘ್ನವಾಗಿ ಸಾಗಲಿ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದೇವಾಲಯದಲ್ಲಿ ದೇವಿಗೆ ಅಗ್ರಪೂಜೆ ಸಲ್ಲಿಸಿ, ಈ ರಾಜ್ಯಕ್ಕೆ ಒಳಿತಾಗಲಿ, ದಸರಾ ಕೈಂಕರ್ಯಗಳು ನಿರ್ವಿಘ್ನವಾಗಿ ಸಾಗಲಿ ಎಂಬ ಪ್ರಾರ್ಥನೆಯೊಂದಿಗೆ ದಸರಾ ಮಹೋತ್ಸವವನ್ನು ಉದ್ಘಾಟಿಸಲಾಯಿತು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಎಂದರೆ ಎಲ್ಲೆಡೆ ಸಂಭ್ರಮ ಮನೆ ಮಾಡಿರುತ್ತದೆ. ಆದರೆ ಕೊರೋನಾದಿಂದ ಅತ್ಯಂತ ಸರಳವಾಗಿ, ಸಾಂಪ್ರದಾಯಿಕವಾಗಿ ಆಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಕೊರೊನಾ ಸಾಂಕ್ರಾಮಿಕ ಸೋಂಕು ಹರಡುವುದನ್ನು ನಿಯಂತ್ರಿಸಬೇಕಾದ ಹಿನ್ನೆಲೆ ದಸರಾ ಮಹೋತ್ಸವದ ಹಲವಾರು ಕಾರ್ಯಕ್ರಮಗಳನ್ನು ಈ ಬಾರಿ ಆಯೋ ಜಿಸುವುದಿಲ್ಲ.

ದಸರಾದ ಸಂಪ್ರದಾಯ ಮತ್ತು ಪರಂಪರೆಯನ್ನು ನಿಲ್ಲಿಸಬಾರದು ಎಂಬ ಉದ್ದೇಶದಿಂದ ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತವಾಗಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಾಗೂ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮಗಳು, ನಂದಿಧ್ವಜ ಪೂಜೆ ಹಾಗೂ ಜಂಬೂಸವಾರಿ ಕಾರ್ಯಕ್ರಮಗಳನ್ನು ಮಾತ್ರ ನೇರವೇರಿಸಲಾಗುತ್ತದೆ.

ಇನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಸರ್ಕಾರ ನೀಡುವ ಕೋವಿಡ್ ಮಾರ್ಗಸೂಚಿಗಳನ್ನು ಗಮನಿಸಿ, ಸನ್ಮಾನ್ಯ ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಎಲ್ಲ ಜನಪ್ರತಿನಿಧಿಗಳ ಸಲಹೆ ಪಡೆದು ಈ ಬಾರಿಯ ದಸರಾ ಮಹೋತ್ಸವನ್ನು ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ಸೀಮಿತಗೊಳಿಸಿ ಆಚರಿಸಲು ನಿರ್ಧರಿ ಸಲಾಗಿದೆ ಎಂದರು.

 
 
 
 
 
 
 
 
 
 
 

Leave a Reply