ಗೋವಂಶ ಹತ್ಯೆ ನಿಷೇಧ ಕಾಯಿದೆ ಜಾರಿಗೆ ಪೇಜಾವರ ಸ್ವಾಮೀಜಿ ಆಗ್ರಹ

ಉಡುಪಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಗೋಹತ್ಯೆ ಮತ್ತು ಸಾಗಾಟದ ಹಿನ್ನಲೆಯಲ್ಲಿ ಅತ್ಯಂತ ಪ್ರಬಲವಾದ ಗೋವಂಶ ಹತ್ಯೆ ನಿಷೇಧ ಕಾಯಿದೆಯನ್ನು ಸೆಪ್ಟೆಂಬರ್ ನಲ್ಲಿ ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ಜಾರಿಗೆಗೊಳಿಸುವಂತೆ ಆಗ್ರಹಿಸಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆ (1964) ಅತ್ಯಂತ ದುರ್ಬಲವಾಗಿದೆ. ಇದರಿಂದ ಬಹಳಷ್ಟು ಗೋವುಗಳ ದಿನನಿತ್ಯ ಹತ್ಯೆ ಆಗುತ್ತಿರುವುದು ಮತ್ತು ಸಾಗಾಟದಲ್ಲಿ ಹಿಂಸೆಯನ್ನು ಅನುಭವಿಸುತ್ತಿರುತ್ತದೆ. ಅದರಿಂದ ಶ್ರೀಕೃಷ್ಣನ ಭಕ್ತರಾದ ನಮಗೆಲ್ಲ ಅತ್ಯಂತ ದುಃಖವಾಗಿದೆ.

ಗೋವುಗಳ ಸುರಕ್ಷತೆಗಾಗಿ, ಗೋವಂಶ ಹತ್ಯೆ ನಿಲ್ಲಬೇಕಾದರೆ ನಮ್ಮ ರಾಜ್ಯದಲ್ಲಿ ಅತ್ಯಂತ ಪ್ರಬಲವಾದ ಗೋವಂಶ ಹತ್ಯೆ ನಿಷೇಧ ಕಾಯಿದೆಯನ್ನು ಇದೇ ಸೆಪ್ಟೆಂಬರ್ ನಲ್ಲಿ  ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ, ಜಾರಿಗೊಳಿಸಬೇಕಾದ ನಮ್ಮ ಒತ್ತಾಯವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 
 
 
 
 
 
 
 
 
 
 

Leave a Reply