ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಭೇಟಿ

ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆ ಇವರನ್ನು ಭೇಟಿಯಾಗಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆ ಬಗ್ಗೆ ಮನವಿ ಸಲ್ಲಿಸಲಾಯಿತು.
 ಮನವಿಗೆ ಸ್ಪಂದಿಸಿದ ಪೂಜ್ಯರು ಶ್ರೀ ಕ್ಷೇತ್ರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಡಾ.ರವಿರಾಜ ವಿ. ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶ್ರೀ ನಾಗೇಶ ಹೆಗ್ಡೆ.
ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ .ರಾಘವೇಂದ್ರ ಕಿಣಿ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರು ಗಳಾದ  ಸತೀಶ್ ಕುಲಾಲ್, ವಸಂತರಾವ್, ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ಮಂಜುನಾಥ್ ಹೆಬ್ಬಾರ್, ಜಯಂತ್ ಕುಂದರ್, ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರದ ಮಂಜುನಾಥ ಸ್ವಾಮಿ, ಕುಕ್ಕೆ ಸುಬ್ರಹ್ಮಣ್ಯ ದೇವರು, ಹಾಗೂ ಸೌತಡ್ಕ ಮಹಾಗಣಪತಿಯ ಸನ್ನಿಧಾನ ದರ್ಶನ ಮಾಡಿ  ಜೀರ್ಣೋದ್ಧಾರ ಪ್ರಕ್ರಿಯೆ ನಿರ್ವಿಘ್ನವಾಗಿ ನೆರವೇರಲೇಂದು  ಶ್ರೀ ದೇವರಲ್ಲಿ ಪ್ರಾರ್ಥಿಸಲಾಯಿತು.
 
 
 
 
 
 
 
 
 
 
 

Leave a Reply