Janardhan Kodavoor/ Team KaravaliXpress
25.6 C
Udupi
Thursday, September 29, 2022
Sathyanatha Stores Brahmavara

ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸುತ್ತು ಪೌಳಿಗೆ ಶಿಲಾನ್ಯಾಸ

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಯ ಭಾಗವಾದ ಸುತ್ತು ಪೌಳಿಯ ಶಿಲಾನ್ಯಾಸವನ್ನು ಇತ್ತೀಚಿಗೆ ಭಾವಿ ಪರ್ಯಾಯ ಮಠಾಧೀಶರಾದ ಕೃಷ್ಣಾಪುರ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ನೆರವೇರಿಸಿ ಅನುಗ್ರಹ ಸಂದೇಶ ನೀಡಿದರು.

 ಜೀರ್ಣೋದ್ಧಾರ ವಿಜ್ಞಾಪನಾ ಪತ್ರ ವನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ನೆರವೇರಿಸಿದರು. ಶ್ರೀಕೃಷ್ಣ ಮುಖ್ಯಪ್ರಾಣ ಅಸೋಸಿಯೇಟ್ಸ್ ಪ್ರೈವೇಟ್ ಲಿಮಿಟೆಡ್ ನ ರಮೇಶ್ ಬೈಲಕೆರೆರವರು ಕರಸೇವಕರಿಗೆ ನೀಡಿದ ಟಿಶರ್ಟನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ನಾಗೇಶ್ ಹೆಗ್ಡೆ ಬಿಡುಗಡೆಗೊಳಿಸಿದರು. 

 ವ್ಯವಸ್ಥಾಪನ ಮಂಡಳಿ ಅಧ್ಯಕ್ಷ ಡಾ. ರವಿರಾಜ್ ಆಚಾರ್ಯ, ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ ಅಂಚನ್, ನಗರಸಭಾ ಸದಸ್ಯೆ ಗೀತಾ ಶೇಟ್, ಪ್ರಧಾನ ತಂತ್ರಿಗಳಾದ ಪಾಡಿಗಾರು ಶೀನಿವಾಸ ತಂತ್ರಿ, ಅರ್ಚಕ ಕೆ .ರಘುಪತಿ ಉಪಾಧ್ಯಾಯ, ದೇವಸ್ಥಾನದ ಪವಿತ್ರಪಾಣಿ ಕುಂಜಿತ್ತಾಯ ಶ್ರೀನಿವಾಸ ಉಪಾಧ್ಯಾಯ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಸಗ್ರಿ ಗೋಪಾಲಕೃಷ್ಣ ಸಾಮಗ,ನಾಗರಾಜ ಶೆಟ್ಟಿ, ರಮೇಶ್ ಶೇರಿಗಾರ್,ಭಾಸ್ಕರ್ ಶೇರಿಗಾರ್,ವಸಂತರಾವ್ ಶ್ರೀಮತಿ ಪದ್ಮಾ ರತ್ನಾಕರ್,ಶ್ರೀಮತಿ ಭಾರತಿ ಚಂದ್ರಶೇಖರ್, ವ್ಯವಸ್ಥಾಪನ ಮಂಡಳಿಯ ಸದಸ್ಯರು ಮತ್ತು ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ,ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರ್ವಹಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!