ವಿಶೇಷ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಕಟೀಲು ಶ್ರೀದುರ್ಗಾಪರಮೇಶ್ವರಿ ಅಮ್ಮ

ಕಟೀಲು ದಕ್ಷಿಣ ಕನ್ನಡ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದು. ನಂದಿನಿ ನದಿಯ ದಂಡೆಯ ಮೇಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ.

ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲೊಂದು. ಜಿಲ್ಲೆಯ ಅನೇಕ ದೇವಾಲಯಗಳಂತೆ ಕಟೀಲು ದೇಗುಲವೂ ವಿದ್ಯಾದಾನ ಮತ್ತು ಅನ್ನದಾನಗಳ ಮೂಲಕ ಸಮಾಜೋನ್ನತಿಗೆ ತನ್ನ ಕಾಣಿಕೆ ಸಲ್ಲಿಸುತ್ತಿದೆ.

ಈ ದೇವಾಲಯವು ನಂದಿನಿ ಎಂಬ ಒಂದು ಪುಟ್ಟ ನದಿಯ ಮಧ್ಯದಲ್ಲಿರುವ ಒಂದು ಸಣ್ಣ ದ್ವೀಪದಲ್ಲಿ ನೆಲೆಗೊಂಡಿದೆ. ಪ್ರತಿ ವರ್ಷವೂ ಸಾವಿರಾರು ಯಾತ್ರಿಕರು ಇಲ್ಲಿಗೆ ತಾಯಿ ದುರ್ಗಾ ಪರಮೇಶ್ವರಿಯ ದರ್ಶನಕ್ಕಾಗಿ ಭೇಟಿ ನೀಡುತ್ತಾರೆ.

 
 
 
 
 
 
 
 
 
 
 

Leave a Reply