Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ಕೊಲ್ಲೂರು ದೇವಸ್ಥಾನ-ವಿದ್ಯಾರಂಭಕ್ಕೆ ಅವಕಾಶ

ಕೊಲ್ಲೂರು ದೇವಸ್ಥಾನ- ನ.24 ರಂದು ಸಂಜೆ ದರ್ಶನಕ್ಕೆ ನಿರ್ಬಂಧ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅಕ್ಟೋಬರ್ 25 ರ ವರೆಗೆ ನವರಾತ್ರಿ ಉತ್ಸವ ಜರುಗಲಿದ್ದು, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ದೇವಾಲಯದಲ್ಲಿ ಅನುಷ್ಟಾನ ಗೊಳಿಸುವ ಸಲುವಾಗಿ ಅಕ್ಟೋಬರ್ 24 ರ ಮಹಾನವಮಿಯಂದು ಸಂಜೆ 5 ಗಂಟೆಯಿಂದ ಸಾರ್ವಜನಿಕರಿಗೆ ದೇವರ ದರ್ಶನವನ್ನು ನಿರ್ಭಂಧಿಸಲಾಗಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ಮತ್ತು ಕರ್ತವ್ಯ ನಿರತ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ದೇವಾಲಯದಲ್ಲಿ ಅನುಷ್ಟಾನಗೊಳಿಸುವ ಸಲುವಾಗಿ ಅಕ್ಟೋಬರ್ 24 ರ ಮಹಾನವಮಿಯಂದು ನಡೆಯಲಿರುವ ರಥೋತ್ಸವವನ್ನು ದೇವಸ್ಥಾನದ ಆವರಣದ ಒಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿಗಳು ಮಾತ್ರ ನೆರವೇರಿಸಲಿದ್ದಾರೆ.

ಅಕ್ಟೋಬರ್ 25 ರ ವಿಜಯದಶಮಿ ದಿನದಂದು ಬೆಳಗ್ಗೆ 4 ಗಂಟೆಯಿಂದ ವಿದ್ಯಾರಂಭ ಪ್ರಾರಂಭವಾಗಲಿದ್ದು,
ವಿದ್ಯಾರಂಭಕ್ಕೆ ದಂಪತಿ ಸಮೇತ ಮಗುವಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!