ಶ್ರೀ ಕೃಷ್ಣ ಮಠದಲ್ಲಿ ಶ್ರೀಗಳಿಂದ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು “ಡಂಗುರಾವ ಸಾರಿ ಹರಿಯ ” ದಾಸರಪದಕ್ಕೆ ನೃತ್ಯ ಸೇವೆ ಮಾಡಿದರು. 

ಕೃಷ್ಣ ದೇವರಿಗೆ ರಾತ್ರಿ ಪೂಜೆಯಾದ ನಂತರ ಉಡುಕು ವಾದ್ಯ, ಸೂರ್ಯವಾದ್ಯ, ನಾದಸ್ವರ, ಸಂಕೀರ್ತನೆ, ಸಂಗೀತ, ಭಾಗವತ ಪುರಾಣಗಳು ಚಂದ್ರಶಾಲೆಯಲ್ಲಿ ನಡೆದ ನಂತರ ದೇವರ ಎದುರಿನ ಮಂಟಪದಲ್ಲಿ ಶ್ರೀಗಳು ದೇವರಿಗೆ ಮಂಗಳಾರತಿ ಮಾಡಿ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ ಮಾಡುತ್ತಾರೆ.

ಈ ಸೇವೆಯು ಆಷಾಡ ಮಾಸದ ಶುಕ್ಲ ಏಕಾದಶಿಯಿಂದ ಕಾರ್ತೀಕ ಮಾಸದ ಶುಕ್ಲ ಏಕಾದಶಿಯವರೆಗೆ ಚಾತುರ್ಮಾಸದ 8 ಏಕಾದಶಿಗಳವರೆಗೂ ನಡೆಯುತ್ತದೆ.

 
 
 
 
 
 
 
 
 
 
 

Leave a Reply