ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಂದು ತೆಪ್ಪೋತ್ಸವದೊಂದಿಗೆ ಲಕ್ಷದೀಪೋತ್ಸವ

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಂದು ದೇವರು ಗರ್ಭಗುಡಿಯಿಂದ ಹೊರಬಂದು ತೆಪ್ಪೋತ್ಸವದೊಂದಿಗೆ ಲಕ್ಷದೀಪೋತ್ಸವ ನಡೆಯಿತು.

ಉತ್ಸವದಲ್ಲಿ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply