ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಲಕ್ಷ್ಮಣ ಸವದಿ ಭೇಟಿ

ಉಡುಪಿ: ಶ್ರೀ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಜ. 31 ರಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ಅವರು ಭೇಟಿ ನೀಡಿ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡರು. ದೇವಸ್ಥಾನದ ಆಡಳಿತ ಮೊಕ್ತೇಸರ ಶಾಸಕ ಶ್ರೀ ಕೆ. ರಘುಪತಿ ಭಟ್ ಸಚಿವರನ್ನು ದೇವಸ್ಥಾನಕ್ಕೆ ಬರಮಾಡಿಕೊಂಡರು.

 ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಎಸ್.ಎನ್.ಈಶ್ವರಪ್ಪ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ಸ್ಥಳೀಯ ನಗರ ಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ಬಾಲಕೃಷ್ಣ ಶೆಟ್ಟಿ, ದೇವಸ್ಥಾನದ ಪ್ರಧಾನ ಅರ್ಚಕ ದಿವಾಕರ ಐತಾಳ್, ಗೋವಿಂದ ಐತಾಳ್ ಹಾಗೂ ಶ್ರೀ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply