ಜನವರಿ 22ಕ್ಕೆ ಮೋದಿಯಿಂದ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ

ನವದೆಹಲಿ: ಮುಂದಿನ ವರ್ಷದ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ರಾಮಲಲ್ಲಾ ಮೂರ್ತಿಯನ್ನು ರಚಿಸಿದ್ದು ಈಗಾಗಲೇ ಅವರು ಅಯೋಧ್ಯೆಯಲ್ಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಅಯೋಧ್ಯೆಯಲ್ಲಿ ರಾಮಮಂದಿರದ ಮೊದಲ ಹಂತದ ನಿರ್ಮಾಣ ಕಾರ್ಯ ಡಿಸೆಂಬರ್ 30ರೊಳಗೆ ಪೂರ್ಣಗೊಳ್ಳಲಿದೆ, ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮೂರು ವಾರಗಳ ಹಿಂದೆ.

ದೇವಾಲಯವನ್ನು ಮೂರು ಹಂತಗಳಲ್ಲಿ ನಿರ್ಮಿಸಲಾಗುತ್ತಿದೆ. ಅದರ ಮೊದಲ ನಿರ್ಮಾಣ ಕಾರ್ಯದ ನಂತರ ಭಕ್ತರು ದೇವಾಲಯವನ್ನು ಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದರು.

 
 
 
 
 
 
 
 
 
 
 

Leave a Reply