ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವ ಎಸ್. ಅಂಗಾರ

 ಉಡುಪಿ: ಸಚಿವರಾದ ಬಳಿಕ ಪ್ರಥಮ ಬಾರಿಗೆ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಇಂದು ಉಡುಪಿಗೆ ಆಗಮಿಸಿದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಶ್ರೀಯುತ ಎಸ್. ಅಂಗಾರ ಅವರನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಕರೆದೊಯ್ದದರು. 

ಸಚಿವರು ಶ್ರೀ ಕೃಷ್ಣನ ದರ್ಶನ ಪಡೆದ ಬಳಿಕ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಯಿಂದ ಆಶೀರ್ವಾದ ಪಡೆದರು.ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಯಿಲಾಡಿ, ಯಶ್ ಪಾಲ್ ಸುವರ್ಣ ಹಾಗೂ ಮಠದ ಗೋವಿಂದರಾಜ್ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply