Janardhan Kodavoor/ Team KaravaliXpress
24.6 C
Udupi
Thursday, June 30, 2022
Sathyanatha Stores Brahmavara

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ ದಂಡ ನಮಸ್ಕಾರವನ್ನು ಮಾಡಿ ಶ್ರೀಮಠದ ಗೌರವ ಸಲ್ಲಿಸಿದರು. 
ಈ ಸಂದರ್ಭ ಪಲಿಮಾರು ಉಭಯ ಶ್ರೀಪಾದರು ನೂತನ ಯತಿಗಳನ್ನು ಸಂಮಾನಿಸಿ ತಮ್ಮ ಮಠದ ತತ್ತ್ವ ಸಂಶೋಧನಾ ಸಂಸತ್ ವತಿಯಿಂದ ಮುದ್ರಣವಾದ ಪುಸ್ತಕಗಳನ್ನು ನೀಡಿ ಹರಸಿ ದರು. ಪಲಿಮಾರು ಮಠದ ದಿವಾನ ಶಿಬರೂರು ವೇದವ್ಯಾಸ ತಂತ್ರಿಗಳು , ಸೋದೆ ಮಠದ ದಿವಾನ ಪಾಡಿಗಾರು ಶ್ರೀನಿವಾಸ ತಂತ್ರಿಗಳು ಹಾಗೂ ಶೀರೂರು ಮಠದ ದಿವಾನ ಉದಯ ಕುಮಾರ ಸರಳತ್ತಾಯರು ಉಪಸ್ಥಿತರಿದ್ದರು.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!