Janardhan Kodavoor/ Team KaravaliXpress
30.6 C
Udupi
Tuesday, August 16, 2022
Sathyanatha Stores Brahmavara

ಜೀರ್ಣೋದ್ದಾರಗೊಳ್ಳುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶ್ರೀ ಕೃಷ್ಣಾಪುರ ಮಠಾಧೀಶರ ಭೇಟಿ

ಶ್ರೀ ಕೃಷ್ಣ ಪೂಜಾ ಕೈಂಕರ್ಯ ಕ್ಕಾಗಿ ಸರ್ವಜ್ಞ ಪೀಠರೋಹಣ ಮಾಡಲಿರುವ ಕೃಷ್ಣಾಪುರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀ ಪಾದರು ಇಂದು  ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಪರ್ಯಾಯ ಮಹೋತ್ಸವಕ್ಕೆ ಆಹ್ವಾನವನ್ನು ನೀಡಿದರು.
 ಈ ಸಂದರ್ಭ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಗುಂಡು ಬಿ ಅಮೀನ್ ಇವರು ದೇವಸ್ಥಾನದ ಪರವಾಗಿ ಪರಮಪೂಜ್ಯ ಸ್ವಾಮೀಜಿಯವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಸುಧಾಕರ ಬಿ ಕುಂದರ್, ಸದಸ್ಯರಾದ ಮನೋಜ್ ಕಾಂಚನ್, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಅರ್ಚಕರಾದ ವಿಷ್ಣುಮೂರ್ತಿ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು. ಸುದ್ಧಿ।ಚಿತ್ರ ಕೃಪೆ ~ ಸುರಭಿ ರತನ್  
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!