ಉಡುಪಿ : ಸಂಭ್ರಮದಿಂದ ನೆರವೇರಿದ ವಿಟ್ಲಪಿಂಡಿ ಉತ್ಸವ

ಉಡುಪಿ: ವಿಟ್ಲಪಿಂಡಿ ಮಹೋತ್ಸವ ಸಾಂಪ್ರದಾಯಿಕ ವಿಧಿ- ವಿಧಾನಗಳೊಂದಿಗೆ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಮಂಗಳವಾರ ವಿಜೃಂಭಣೆಯಿಂದ ಸಂಪನ್ನಗೊಂಡಿತು.

 

ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಕೃಷ್ಣನ ಮೃಣ್ಮಯ ಮೂರ್ತಿಯನ್ನು ಇರಿಸಿ ಪೂಜಿಸಿ, ಮೆರವಣಿಗೆ ನಡೆಸಲಾಯಿತು.ಬಳಿಕ ಮೃಣ್ಮಯ ಮೂರ್ತಿಯನ್ನು ಮಧ್ವ ಸರೋವರದಲ್ಲಿ ಜಲಸ್ತಂಭನಗೊಳಿಸಲಾಯಿತು.

ಕೋವಿಡ್‌ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಥಬೀದಿ ಪ್ರವೇಶ ನಿರಾಕರಿಸಿದ್ದರಿಂದ ಜನಜಂಗುಳಿ ಇರಲಿಲ್ಲ. ಕೃಷ್ಣ ಮಠದ ಮತ್ತು ಅಷ್ಟಮಠಗಳ ಸಿಬ್ಬಂದಿಗಳು, ಗೊಲ್ಲ ವೇಷಧಾರಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕರಿಗೆ ರಥಬೀದಿ ಪ್ರವೇಶ ನಿರ್ಬಂಧಿಸಲು ರಥಬೀದಿಯ ಎಲ್ಲ ಗೇಟುಗಳಲ್ಲೂ ಪೊಲೀಸರನ್ನು ನಿಯೋಜಿಸಲಾಗಿತ್ತು. ರಥಬೀದಿ ಉದ್ದಕ್ಕೂ ನೆಡಲಾಗಿದ್ದ ಗುರ್ಜಿಗಳಲ್ಲಿ ಕಟ್ಟಿದ್ದ ಮೊಸರು ಕುಡಿಕೆಗಳನ್ನು ಗೋವಳರು ಒಂದೊಂದಾಗಿ ಒಡೆಯುತ್ತಾ ಸಾಗಿದರು. ಆಗಮಿಸಿದ ಭಕ್ತಾದಿಗಳಿಗೆ ಉಂಡೆ ಚಕ್ಕುಲಿ ವಿತರಿಸಲಾಯಿತು.

 

 
 
 
 
 
 
 
 
 
 
 

Leave a Reply