ಪಂಜರ ಮೀನು ಕೃಷಿ ಕಾರ್ಯಾಗಾರ

ಮೀನುಗಾರಿಕೆ ಇಲಾಖೆ ವತಿಯಿಂದ ಮಂಗಳವಾರ ಉಡುಪಿ ಪುರಭವನದಲ್ಲಿ ಆಯೋಜಿಸಿದ್ದ ಪಂಜರ ಮೀನು ಕೃಷಿ ಕಾರ್ಯಾಗಾರವನ್ನು ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.

ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಶ್ರೀ ದಿನಕರ ಬಾಬು, ಉಪಾಧ್ಯಕ್ಷ ಶ್ರೀಮತಿ ಶೀಲಾ ಕೆ. ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷಯಶ್ ಪಾಲ್ ಸುವರ್ಣ ಹಾಗೂ ಜನ ಪ್ರತಿನಿಧಿಗಳು, ಮೀನುಗಾರರ ಮುಖಂಡರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿ ದ್ದರು.

Leave a Reply