ಪೇಜಾವರ ಶ್ರೀಗಳ‌ ಭೇಟಿ

ಉಡುಪಿ ಶಾಸಕ ಕೆ. ರಘುಪತಿ ಭಟ್ ಜು. 25ರಂದು ನೀಲಾವರ ಗೋಶಾಲೆ ಆವರಣದ ಶ್ರೀಕೃಷ್ಣ ಮಂದಿರದಲ್ಲಿ ಚಾತುರ್ಮಾಸ ವ್ರತದಲ್ಲಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಗೋಶಾಲೆಯಲ್ಲಿರುವ 1,500ಕ್ಕೂ ಅಧಿಕ ಗೋವುಗಳ ಪಾಲನೆ ಮತ್ತು ಅವುಗಳ ನಿರ್ವಹಣೆ ಬಗ್ಗೆ ಚರ್ಚಿಸಿದರು.

ಬ್ರಹ್ಮಾವರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಮಹೇಂದ್ರ ಕುಮಾರ್, ಚೇರ್ಕಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ, ಸದಸ್ಯ ಕಮಲಾಕ್ಷ ಹೆಬ್ಬಾರ್, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಶ್ಯಾಮ್ ಪ್ರಸಾದ ಭಟ್ ಮೊದಲಾದವರಿದ್ದರು.

 
 
 
 
 
 
 

Leave a Reply