ಪೌಡರ್ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ-ಮಂಗಳೂರು ಏರ್ಪೋರ್ಟ್ ನಲ್ಲಿ ಓರ್ವ ಬಂಧನ  

metal prison bars with handcuffs on black background

ಮಂಗಳೂರು : ದುಬೈನಿಂದ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆಸಿಕೊಂಡಿದ್ದಾರೆ. ಬಂಧಿತ ಆರೋಪಿ ಮಂಗಳೂರಿನ ಅಬೂಬಕರ್ ಸಿದ್ದೀಕ್ ಎಂದು ಪೊಲೀಸರು ತಿಳಿಸಿದ್ದಾರೆ.

ದುಬೈನಿಂದ ಸ್ಪೈಸ್‌ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದ ಈತನ ತಪಾಸಣೆ ವೇಳೆ 24 ಕ್ಯಾರೆಟ್‌ನ 634 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 32,96,800 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯು ಪೌಡರ್ ರೂಪದ ಚಿನ್ನವನ್ನು ದೇಹಕ್ಕೆ ಅಂಟಿಸಿಕೊಂಡು ಅಕ್ರಮ ಸಾಗಾಟಕ್ಕೆ‌ ಮಾಡುತ್ತಿದ್ದ ಎಂಬ ಮಾಹಿತಿಯನ್ನು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ .

 
 
 
 
 
 
 
 
 

Leave a Reply