ನ.17ಕ್ಕೆ ಕಾಲೇಜು ಪುನರಾರಂಭ, ವಿದ್ಯಾರ್ಥಿಗಳ ಹಾಜರಿ ಕಡ್ಡಾಯವಲ್ಲ  

ಬೆಂಗಳೂರು: ಕರೊನಾ ಸೋಂಕಿನ ಭೀತಿಯಿಂದಾಗಿ ಶಾಲಾ ಕಾಲೇಜುಗಳನ್ನು ಸ್ಥಗಿತಗೊಳಿಸಲಾಗಿತ್ತು.ಇದೀಗ ಪದವಿ, ಸ್ನಾತಕೋತ್ತರ ಪದವಿ, ‌ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜು ಆರಂಭಕ್ಕೆ ಸರ್ಕಾರ ದಿನಾಂಕ ನಿಗದಿ ಮಾಡಿ ಸಿದ್ಧತೆ ನಡೆಸುತ್ತಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರದಂದು ನಡೆದ ಸಭೆಯಲ್ಲಿ ಕಾಲೇಜು ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಅಶ್ವಥನಾರಾಯಣ ಅವರು ಪ್ರಾತ್ಯಕ್ಷಿಕೆ ಮೂಲಕ ಕಾಲೇಜು ಆರಂಭಿಸಿದೆ ತೆಗೆದುಕೊಳ್ಳಲಿ ರುವ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ಕೊಟ್ಟರು. ವಿವಿಧ ರಾಜ್ಯದಲ್ಲಿ ಈಗಾಗಲೇ ಕಾಲೇಜು ಓಪನ್ ಆಗಿದ್ದು, ಅಲ್ಲಿನ ಪರಿಸ್ಥಿತಿಯ ಬಗ್ಗೆಯೂ ಸಭೆಯಲ್ಲಿ ಸಮಾಲೋಚಿಸಲಾಯಿತು. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ, ಪ್ರತಿ ವಿದ್ಯಾರ್ಥಿಗೂ ಉಷ್ಣಾಂಶ ಚೆಕ್ ಮಾಡುವ ಬಗ್ಗೆಯೂ ನಿರ್ಧಾರ ಮಾಡಲಾಗಿದೆ.

ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಅಶ್ವಥನಾರಾಯಣ, ಕಾಲೇಜು ಆರಂಭಕ್ಕೆ ನವೆಂಬರ್​ 17ರಂದು ದಿನಾಂಕ ನಿಗದಿ ಪಡಿಸಲಾಗಿದೆ. ಆದರೆ ತರಗತಿ ಬರುವುದು ಕಡ್ಡಾಯವಲ್ಲ, ಬರುವುದು-ಬಿಡುವುದು ವಿದ್ಯಾರ್ಥಿ ಗಳ ಆಯ್ಕೆ ಎಂದಿದ್ದಾರೆ. ಪೋಷಕರು ಬರೆದು ಒಪ್ಪಿಗೆ ಸೂಚಿಸಿದರಷ್ಟೇ ಕಾಲೇಜಿಗೆ ಬರಲು ವಿದ್ಯಾರ್ಥಿಗಳಿಗೆ ಅನುಮತಿ ನೀಡಲಾಗುತ್ತದೆ. ಹಾಗೇಯೆ ಆನ್​ಲೈನ್ ಮುಖಾಂತರ ಬೇಕಾದರೂ ಕ್ಲಾಸ್ ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಇನ್ನು ಎಲ್ಲ ಕಾಲೇಜಿನಲ್ಲೂ ಟಾಸ್ಕ್ ಪೋರ್ಸ್​ ಇರುತ್ತದೆ. ಯಾರಿಗೂ ಒತ್ತಾಯವಿಲ್ಲ. ವಿದ್ಯಾರ್ಥಿಗಳ ಸಂಖ್ಯೆ ನೋಡಿ ಕೊಂಡು ಪಾಳಿ ಪ್ರಕಾರ ಕ್ಲಾಸ್ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.

 
 
 
 
 
 
 
 
 

Leave a Reply